ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ: ಅಹಾರದ ಅತ್ಯತ್ತಮ ಗುಣಮಟ್ಟಕ್ಕಾಗಿ ಕ್ವಾಲಿಟಿ ಪುಡ್ ಕಸ್ಟಮರ್ ಸ್ಯಾಟಿಸ್ಫ್ಯಾಕ್ಷನ್ ಅವಾರ್ಡ್ ಶೆಫ್‌ಟಾಕ್ ಸಂಸ್ಥೆಯ ಎಂಡಿ ಗೋವಿಂದ ಬಾಬು ಪೂಜಾರಿ ಅವರಿಗೆ ಒಲಿದಿದೆ. ದೆಹಲಿಯಲ್ಲಿ ನಡೆದ ಇಂಟರ್ನ್ಯಾಷನಲ್ ಅಚಿವರ್ಸ್ ಕಾನ್ಫರೆಸ್ಸ್ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಶ್ರೀವರಲಕ್ಷ್ಮೀ ಚಾರಿಟೇಬಲ್ ಮೂಲಕ ಹುಟ್ಟೂರಿನ ಮಂದಿಗೆ ನೆರವು:

ಪರಿಶ್ರಮದಿಂದಲೇ ಬದುಕು ಕಟ್ಟಿಕೊಂಡ ಗೋವಿಂದ ಬಾಬು ಪೂಜಾರಿ ಅವರು ಹಂತ ಹಂತವಾಗಿ ಸಾಧನೆಯ ಮೆಟ್ಟಿಲು ಹತ್ತಿ ಯಶಸ್ವಿಯಾಗಿದ್ದಾರೆ. ಶೆಫ್‌ಟಾಕ್ ಪುಡ್ & ಹಾಸ್ಪಿಟಾಲಿಟಿ ಸಂಸ್ಥೆಯ ಆಡಳಿತ ನಿರ್ದೇಶಕರಾಗಿರುವ ಗೋವಿಂದ ಪೂಜಾರಿ ಅವರು ಮುಂಬೈ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ತಮ್ಮ ಉದ್ಯಮವನ್ನು ವಿಸ್ತರಿಸಿ ಸಾವಿರಾರು ಮಂದಿಗೆ ಉದ್ಯೋಗ ನೀಡಿದ್ದಾರೆ.
ನಾಯಕತ್ವದ ಕೌಶಲ್ಯ ಮತ್ತು ಶ್ರಮದ ದುಡಿಮೆ ಮೂಲಕ ಯಶಸ್ಸು, ಪ್ರಸಿದ್ಧಿಗಳಿಸಿರುವ ಅವರು ಹುಟ್ಟೂರು ಉಪ್ಪುಂದದಲ್ಲಿ ಜನೋಪಕಾರಿ ಸಂಸ್ಥೆಯೊಂದು ಇರಬೇಕೆಂಬ ಆಶಯದಿಂದ 2015ರಲ್ಲಿ ಶ್ರೀ ವರಲಕ್ಷ್ಮೀ ಸೌಹಾರ್ದ ಸಹಕಾರಿಯನ್ನು ತೆರೆದರು. ಈ ಮೂಲಕ ಆರ್ಥಿಕವಾಗಿ ಹಿಂದುಳಿದ ಎಲ್ಲಾ ವರ್ಗದ ಜನರಿಗೆ ಆರೋಗ್ಯ ಹಾಗೂ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುತ್ತಿದ್ದಾರೆ.

ಹಲವು ಪ್ರಶಸ್ತಿ:
ಅವರ ಕಂಪೆನಿಗೆ ಮುಂಬೈನ ಬಿಲ್ಲವ ಚೆಂಬರ್ ಆಫ್ ಕಾಮರ್ಸ್ & ಇಂಡಸ್ಟ್ರಿ, ಎಚ್‌ಡಿಎಫ್‌ಸಿ ಬ್ಯಾಂಕ್ ಸಹಯೋಗದೊಂದಿಗೆ ಆಯೋಜಿಸಿದ್ದ ಉದ್ಯಮ ಸಮಾವೇಶಲ್ಲಿ ‘ಉದ್ಯಮ ಶ್ರೇಷ್ಠತಾ ಪ್ರಶಸ್ತಿ’ 2016ನೇ ಸಾಲಿನಲ್ಲಿ ಆಲ್ ಇಂಡಿಯ ಅಚೀವರ್ಸ್ ಫೌಂಡೇಶನ್‌ನಿಂದ ಶೆಫ್‌ಟಾಕ್ ಹಾಗೂ ಆಡಳಿತ ನಿರ್ದೇಶಕ ಗೋವಿಂದ ಪೂಜಾರಿ ಅವರಿಗೆ ‘ನಾಯಕತ್ವ ಹಾಗೂ ಕ್ಷಿಪ್ರ ಬೆಳವಣಿಗೆಯ ಕಂಪೆನಿ’ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಲಭಿಸಿವೆ.

