ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಮುಖ ಕಂಡುಬಂದ ಹಿನ್ನೆಲೆಯಲ್ಲಿ ಅನ್ ಲಾಕ್ 2.0 ಮಾರ್ಗಸೂಚಿ ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಅನ್ ಲಾಕ್ ಭಾಗ್ಯ ದೊರಕಿದ್ದು,ಸಂಜೆ 5 ರ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.
ಈ ಕುರಿತು ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಆದೇಶ ಹೊರಡಿಸಿದ್ದು, ಜೂ.30ರವರೆಗಿನ ಪಾಸಿಟಿವ್ ಪ್ರಕರಣಗಳ ದರವನ್ನು ಮೌಲ್ಯಮಾಪನ ಮಾಡಿ ಪಾಸಿಟಿವ್ ದರ ಇಳಿಕೆಯದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಕೆಟಗರಿ-1 ಜಿಲ್ಲೆಗಳೊಂದಿಗೆ ಸೇರ್ಪಡೆಗೊಳಿಸಲು ಆದೇಶಿಸಿದ್ದಾರೆ.
ಅನ್ ಲಾಕ್ ಜಿಲ್ಲೆಗಳಿಗೆ ಅನುಮತಿಸಲಾದ ಎಲ್ಲಾ ಹೆಚ್ಚುವರಿ ಕಾರ್ಯಚಟುವಟಿಕೆಗಳನ್ನು ದಕ್ಷಿಣ ಕನ್ನಡ ಜಿಲ್ಲೆಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ದಿನಾಂಕ ಜು.5ರ ಬೆಳಿಗ್ಗೆ 5 ಗಂಟೆಯವರೆಗೆ ಅನ್ವಯವಾಗುತ್ತವೆ ಎಂದು ಅವರು ಹೇಳಿದ್ದಾರೆ.

ಇಂದು ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ3,203 ರಷ್ಟು ವರದಿಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 28,47,013ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ ಕೋವಿಡ್ ಗೆ 94ಮಂದಿ ಬಲಿಯಾಗಿದ್ದು ಸಾವಿನ ಸಂಖ್ಯೆ 35,135ಕ್ಕೆ ಏರಿಕೆಯಾಗಿದೆ.
ಇನ್ನು ಅನ್ ಲಾಕ್ ಘೋಷಣೆ ಮಾಡಿದ್ದರೂ ವಾರಾಂತ್ಯ ಕರ್ಫ್ಯೂ ರಾಜ್ಯದಲ್ಲಿ ಮುಂದುವರಿಯುವ ಸಾಧ್ಯತೆ ಇದೆ.
