Connect with us

Hi, what are you looking for?

Diksoochi News

Uncategorized

ಟೋಕಿಯೋ ಒಲಿಂಪಿಕ್ಸ್‌ಗೆ ಭಾರತದ ಪ್ರಥಮ ಮಹಿಳಾ ಸ್ವಿಮ್ಮರ್ ಆಗಿ ಮಾನಾ ಪಟೇಲ್ ಆಯ್ಕೆ

0

ನವದೆಹಲಿ : ಶುಕ್ರವಾರದಂದು ಭಾರತದ ಭರವಸೆಯ ಈಜುಗಾರ್ತಿ ಮಾನಾ ಪಟೇಲ್ ಐತಿಹಾಸಿಕ ಸಾಧನೆಯನ್ನು ಮಾಡಿದ್ದಾರೆ.2020 ಟೋಕಿಯೋ ಒಲಿಂಪಿಕ್ಸ್ ಗೆ ಆಯ್ಕೆಯಾದ ಭಾರತದ ಮೊದಲ ಈಜುಪಟು ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಮಾನಾ ಪಟೇಲ್ ಯೂನಿವರ್ಸಾಲಿಟಿ ಕೋಟಾದಲ್ಲಿ ಈ ಅವಕಾಶವನ್ನು ಪಡೆದುಕೊಂಡಿದ್ದಾರೆ.

21ರ ಹರೆಯದ ಮಾನಾ ಪಟೇಲ್ ಸ್ಮಿಮ್ಮರ್‌ಗಳಾದ ಶ್ರೀಹರಿ ನಟರಾಜನ್ ಹಾಗೂ ಸಜನ್ ಪ್ರಕಾಶ್ ಅವರನ್ನು ಒಳಗೊಂಡ ಭಾರತದ ಸ್ವಿಮ್ಮಿಂಗ್ ಸ್ಕ್ವಾಡ್‌ಗೆ ಸೇರ್ಪಡೆಗೊಂಡಿದ್ದಾರೆ.
ಜುಲೈ 23ರಿಂದ ಆಗಸ್ಟ್ 8ರ ವರೆಗೆ ಜಪಾನ್‌ನ ರಾಜಧಾನಿ ಟೋಕಿಯೋದಲ್ಲಿ ಈ ಮಹತ್ವದ ಕ್ರೀಡಾಕೂಟ ನಡೆಯಲಿದ್ದು, ಮಾನಾ ಮಟೇಲ್ 100 ಮೀಟರ್ ಬ್ಯಾಕ್‌ಸ್ಟ್ರೋಕ್ ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ. ಪುರುಷ ಸ್ಪರ್ಧಿಗಳಾದ ಸುಜನ್ ಪ್ರಕಾಶ್ ಹಾಗೂ ಶ್ರೀಹರಿ ನಟರಾಜ್ ಕ್ರಮವಾಗಿ 200 ಮೀಟರ್ ಬಟರ್‌ಫ್ಲೈ ಹಾಗೂ 100 ಮೀಟರ್ ಬ್ಯಾಕ್‌ಸ್ಟ್ರೋಕ್ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಈ ಇಬ್ಬರೂ ಕಳೆದ ತಿಂಗಳು ರೋಮ್‌ನಲ್ಲಿ ನಡೆದ ಸ್ಪರ್ಧೆಯಲ್ಲಿ ಒಲಿಂಪಿಕ್ಸ್‌ಗೆ ಅರ್ಹತೆಯನ್ನು ಗಿಟ್ಟಿಸಿಕೊಂಡಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

error: Content is protected !!