Connect with us

Hi, what are you looking for?

Diksoochi News

ರಾಜ್ಯ

ವಿಶ್ವ ವಿಖ್ಯಾತ ಮೈಸೂರು ಅರಮನೆ ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶ

0

ಮೈಸೂರು : ಕೊರೊನಾ ಕಾರಣದಿಂದಾಗಿ ಸುಮಾರು ಎರಡು ತಿಂಗಳಿಗೂ ಹೆಚ್ಚು ಕಾಲ ಕರ್ನಾಟಕ ಲಾಕ್ಡೌನ್ ಪರಿಸ್ಥಿತಿಯಲ್ಲಿತ್ತು. ಇದರಿಂದಾಗಿ ಪ್ರವಾಸಿ ತಾಣಗಳು ಸ್ತಬ್ಧವಾಗಿದ್ದವು. ಇದರಲ್ಲಿ ಅರಮನೆ ನಗರಿ ಮೈಸೂರು ಕೂಡ ಒಂದು ವಿಶ್ವವಿಖ್ಯಾತ ಮೈಸೂರು ಅಂಬಾವಿಲಾಸ ಅರಮನೆ ಕೂಡ ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿತ್ತು. ಅನ್ ಲಾಕ್ 3.0 ನ ಮಾರ್ಗಸೂಚಿಯಂತೆ ಪ್ರವಾಸಿ ತಾಣಗಳು ಒಂದೊಂದಾಗಿ ತೆರೆಯುತ್ತಿವೆ.

ಜುಲೈ 5 ರಿಂದಲೇ ಪ್ರವಾಸಿಗರು ಅರಮನೆ ವೀಕ್ಷಣೆಗೆ ಬರಬಹುದಾಗಿದ್ದು, ಕೋವಿಡ್ ನಿಯಮ ಪಾಲನೆಯೊಂದಿಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ ಸಾರ್ವಜನಿಕರು ಅರಮನೆಗೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ.

ವೀಕ್ಷಣೆಗೆ ಬರುವ ಪ್ರವಾಸಿಗರು ಅರಮನೆ ಪ್ರವೇಶಕ್ಕೆ ಬೇಕಾದ ಟಿಕೆಟ್‌ನ್ನು ಅರಮನೆಯ ಕೌಂಟರ್‌ನಲ್ಲಿ ಅಥವಾ ಆನ್‌ಲೈನ್‌ ಮೂಲಕ ಪಡೆಯಬಹುದಾಗಿದೆ ಅರಮನೆ ವೆಬ್‌ಸೈಟ್ (www.mysorepalace.gov.in). ಪ್ರವಾಸಿಗರಿಗೆ ಅರಮನೆಯ ಪ್ರವೇಶ ಹಾಗೂ ನಿರ್ಗಮನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಪ್ರವೇಶ ದ್ವಾರಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!