ಲಾಕ್ ಡೌನ್ ಸಡಿಲಿಕೆ ಮಾಡಿರುವ ಬೆನ್ನಲ್ಲೇ ಬೆಂಗಳೂರು ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಕಮಿಷನರ್ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಇದರ ಹೊರತಾಗಿ ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಜನರು ಗುಂಪುಗೂಡಬಾರದು. ಬಸ್ ನಿಲ್ದಾಣ, ಮೆಟ್ರೋ, ರೈಲು ನಿಲ್ದಾಣಗಳಿಗೆ ಇದು ಅನ್ವಯಿಸುವುದಿಲ್ಲ.
ಉಳಿದಂತೆ ರಾಜ್ಯ ಸರ್ಕಾರದ ಎಲ್ಲ ನಿಯಮಗಳನ್ನು ಜನರು ಪಾಲಿಸಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶಿಸಿದ್ದಾರೆ.
Advertisement. Scroll to continue reading.