Connect with us

Hi, what are you looking for?

Diksoochi News

ರಾಷ್ಟ್ರೀಯ

ಹಿಮಾಚಲ ಪ್ರದೇಶದ ಮಾಜಿ ಸಿಎಂ ವೀರಭದ್ರ ಸಿಂಗ್ ನಿಧನ

0

ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನ ಹಿರಿಯ ನಾಯಕ ವೀರಭದ್ರ ಸಿಂಗ್ ವಿಧಿವಶರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆ ಹಾಗೂ ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಇವರನ್ನು ಶಿಮ್ಲಾದ ಇಂದಿರಾಗಾಂಧಿ ಮೆಡಿಕಲ್ ಕಾಲೇಜಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಎರಡು ಬಾರಿ ಕೊರೊನಾ ಸೋಂಕಿಗೂ ಒಳಗಾಗಿದ್ದರು. ಎರಡು ಬಾರಿ ಗುಣಮುಖರಾಗಿ ಮನೆಗೆ ತೆರಳಿದ್ದ ಇವರಿಗೆ ತೀವ್ರ ಉಸಿರಾಟ ಸಮಸ್ಯೆ,ಹೃದಯ ಸಮಸ್ಯೆ ಕಾಡಿತ್ತು ಸೋಮವಾರದಂದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

9 ಬಾರಿ ಶಾಸಕರಾಗಿ,5 ಭಾರಿ ಸಂಸದರಾಗಿದ್ದ ವೀರಭದ್ರ ಸಿಂಗ್, 6 ಬಾರಿ ಹಿಮಾಚಲಪ್ರದೇಶದ ಸಿಎಂ ಆಗಿ ಕರ್ತವ್ಯ ನಿರ್ವಹಿಸಿದ್ದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!