Connect with us

Hi, what are you looking for?

Diksoochi News

ರಾಜ್ಯ

ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ

0

ಬೆಂಗಳೂರು : ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನಳಲ್ಲಿ ನೈರುತ್ಯ ಮುಂಗಾರು ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಹಾರಾಷ್ಟ್ರ, ಕೇರಳ, ಗೋವಾ, ಕರ್ನಾಟಕದಲ್ಲಿ ಜುಲೈ 11 ರ ವರೆಗೂ ಭಾರೀ ಮಳೆಯಾಗುವ ಬಗ್ಗೆ ಇಲಾಖೆ ಸೂಚನೆ ನೀಡಿದೆ.
ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿಯಿಂದ ನೈರುತ್ಯ ಮುಂಗಾರು ಬಲಗೊಳ್ಳಲಿದ್ದು, ಕರಾವಳಿ ರಾಜ್ಯಗಳಲ್ಲಿ ಹೆಚ್ಚಿನ ಮಳೆ ಬರುವ ಸಾಧ್ಯತೆ ಇದೆ ಂದು ಇಲಾಖೆ ಹೇಳಿದೆ.
ಕೇರಳದ ನಂತರ ಜೂನ್ 6 ರಂದು ಮುಂಗಾರು ರಾಜ್ಯ ಪ್ರವೇಶಿಸಿತ್ತು. ಆದರೆ, ಎರಡನೇ ವಾರದಲ್ಲೇ ಮಳೆ ಕ್ಷೀಣಿಸಿತ್ತು ಇದು ರೈತರನ್ನು ಕಂಗಾಲು ಮಾಡಿತ್ತು. ಹಲವು ದಿನಗಳ ನಂತರ ಮತ್ತೆ ಮಳೆ ಆರಂಭಗೊಂಡಿದೆ. ಜುಲೈ 10 ರಿಂದ ಎರಡು ದಿನ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜುಲೈ ತಿಂಗಳಲ್ಲಿ ಅಧಿಕ ಮಳೆ ಸಾಧ್ಯತೆ ಇದ್ದು, 94 ರಿಂದ 106%(ದೀರ್ಘಾವಧಿ ಸರಾಸರಿ) ಮಳೆಯಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ತಿಳಿಸಿದೆ.

Click to comment

Leave a Reply

Your email address will not be published. Required fields are marked *

You May Also Like

ಅಂತಾರಾಷ್ಟ್ರೀಯ

0 ಜೆರುಸಲೇಂ: ನಿರೀಕ್ಷೆಯಂತೆಯೇ ಇಸ್ರೇಲ್ ಮೇಲೆ ಇರಾನ್ ದಾಳಿ ನಡೆಸಿದೆ. ಬ್ಯಾಲಿಸ್ಟಿಕ್ ಕ್ಷಿಪಣಿಗಳು ಹಾಗೂ ಕ್ರೂಸ್​ ಕ್ಷಿಪಣಿಗಳು ಸೇರಿದಂತೆ 200ಕ್ಕೂ ಹೆಚ್ಚು ಬಗೆಯ ಡ್ರೋನ್​ ಹಾಗೂ ಕ್ಷಿಪಣಿಗಳ ದಾಳಿಗಳನ್ನು ನಡೆಸಿದೆ. ಸಿರಿಯಾದ ರಾಜಧಾನಿ...

ರಾಷ್ಟ್ರೀಯ

0 ನವದೆಹಲಿ: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಇನ್ನು ಕೇವಲ ಐದು ದಿನಗಳು ಬಾಕಿ ಉಳಿದಿರುವಾಗ, ಭಾರತೀಯ ಜನತಾ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯನ್ನು ಭಾನುವಾರ ಬಿಡುಗಡೆ ಮಾಡಿದ್ದು “ಮೋದಿ ಕಿ ಗ್ಯಾರಂಟಿ”...

ರಾಜ್ಯ

0 ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಪತ್ನಿಯನ್ನು ಉಸಿರುಗಟ್ಟಿಸಿ ಹತ್ಯೆಗೈದ ಘಟನೆ ನಗರದ ಹೆಚ್‍ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಗಿರಿಜಾ ಎಂದು ಗುರುತಿಸಲಾಗಿದೆ. ಆಕೆಯ ಪತಿ ನವೀನ್ ಹತ್ಯೆಗೈದ ಆರೋಪಿಯಾಗಿದ್ದಾನೆ....

ಕರಾವಳಿ

0 ಮಂಗಳೂರು: ಲೋಕಸಭೆ ಚುನಾವಣೆ 2024 ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಸಂಜೆ ಮಂಗಳೂರಿನಲ್ಲಿ ಬೃಹತ್‌ ರೋಡ್‌ ಶೋ ಕೈಗೊಂಡರು.ರೋಡ್ ಶೋ ಗೂ ಮೊದಲು ನಾರಾಯಣ ಗುರು ವೃತ್ತದಲ್ಲಿ ನಾರಾಯಣ...

ಅಂತಾರಾಷ್ಟ್ರೀಯ

0 ಬೊಗೋಟಾ: ಈ ಬಾರಿ ಬೇಸಿಗೆಗೆ ಸಿಲಿಕಾನ್‌ ಸಿಟಿ ಬೆಂಗಳೂರು ಮಾತ್ರವಲ್ಲ ವಿಶ್ವದ ವಿವಿಧೆಡೆ ಮಹಾನಗರಗಳೂ ತೀವ್ರ ನೀರಿನ ಕೊರತೆ ಎದುರಿಸುತ್ತಿವೆ. ಅದರಲ್ಲೂ ದಕ್ಷಿಣ ಅಮೆರಿಕದ ಬೊಗೋಟಾ ನಗರವಂತೂ ಗಂಭೀರ ಸ್ಥಿತಿಯಲ್ಲಿದೆ. ಜನರಿಗೆ ಆಶಾಕಿರಣದಂತಿದ್ದ...

error: Content is protected !!