ನಟ ದುನಿಯಾ ವಿಜಯ್ ತಾಯಿ ನಾರಾಯಣಮ್ಮ ಗುರುವಾರ ನಿಧನರಾಗಿದ್ದಾರೆ. ಕಳೆದ 20 ದಿನಗಳಿಂದ ನಾರಾಯಣಮ್ಮ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ಬ್ರೇನ್ ಸ್ಟ್ರೋಕ್ ಆಗಿತ್ತು. ಆಸ್ಪತ್ರೆಯಿಂದ ಮನೆಗೆ ಶಿಫ್ಟ್ ಮಾಡಲಾಗಿತ್ತು. ಮನೆಗೆ ವೈದ್ಯರು ಆಗಮಿಸಿ ಚಿಕಿತ್ಸೆ ನೀಡುತ್ತಿದ್ದರು. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ನೋವು ಹಂಚಿಕೊಂಡಿರುವ ವಿಜಿ ” ಅಮ್ಮ ಮತ್ತೆ ಹುಟ್ಟಿ ಬಾ ” ಎಂದು ಬರೆದುಕೊಂಡಿದ್ದಾರೆ. ತಾಯಿಯ ಅಂತ್ಯಕ್ರಿಯೆಯನ್ನು ಅನೇಕಲ್ ಕುಂಬಾರಹಳ್ಳಿಯಲ್ಲಿ ನಾಳೆ ನಡೆಸಲು ವಿಜಿ ನಿರ್ಧರಿಸಿದ್ದಾರೆ.