ವರದಿ : ದಿನೇಶ್ ರಾಯಪ್ಪನಮಠ
ಬಸ್ರೂರು : ಕರಾವಳಿಯಲ್ಲಿ ಮಳೆಯ ಆರ್ಭಟ ಜೋರಾಗಿದೆ. ಬುಧವಾರ ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಬಸ್ರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗಣಪಯ್ಯ ಗಾಣಿಗ ಎಂಬವರ ಮನೆಯ ಧೂಪದ ಮರ ಬಿದ್ದು ಮೇಲ್ಛಾವಣಿ ಕುಸಿದಿದೆ. ಪರಿಣಾಮ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು,ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.
ಬೃಹದಾಕಾರದ ಮರ ಬಿದ್ದ ಪರಿಣಾಮ ಸುಮಾರು 5 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಗ್ರಾಮ ಲೆಕ್ಕಿಗರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಪಿಡಿಓ ಸ್ಥಳಕ್ಕೆ ಆಗಮಿಸಿದ್ದು, ಮರ ತೆರವು ಕಾರ್ಯಾಚರಣೆ ಮುಂದುವರೆದಿದೆ.
Advertisement. Scroll to continue reading.