Connect with us

Hi, what are you looking for?

Diksoochi News

ರಾಜ್ಯ

ತಿಂಗಳಿಗೆ ಕನಿಷ್ಠ 1.5 ಕೋಟಿ ಕೋವಿಡ್ ಲಸಿಕೆಗಳನ್ನು ಪೂರೈಸುವಂತೆ ಪ್ರಧಾನಿಗೆ ಮನವಿ ಮಾಡಿದ ಸಿ ಎಂ ಯಡಿಯೂರಪ್ಪ

0

ತಿಂಗಳಿಗೆ ಕನಿಷ್ಠ 1.5 ಕೋಟಿ ಕೋವಿಡ್ ಲಸಿಕೆಗಳನ್ನು ಪೂರೈಸುವಂತೆ ಪ್ರಧಾನಿಗೆ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಇಂದು ನಡೆದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿನ ಮೂಲಕ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ, ಯುರೋಪ್ ಮತ್ತಿತರ ರಾಷ್ಟ್ರಗಳಲ್ಲಿ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಬೇಕು. ಮೂರನೇ ಅಲೆಗೆ ಪೂರ್ವಸಿದ್ಧತೆ ಮಾಡಿಕೊಳ್ಳಬೇಕು ಆರೋಗ್ಯ ವ್ಯವಸ್ಥೆಯ ಮೂಲಸೌಕರ್ಯ ಹೆಚ್ಚಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ರಾಜ್ಯದಲ್ಲಿ ಈವರೆಗೆ 2.62 ಕೋಟಿ ಲಸಿಕೆಯನ್ನು ನೀಡಲಾಗಿದ್ದು, ಪ್ರತಿ ದಿನ 5 ಲಕ್ಷ ಡೋಸ್ ಗಳಂತೆ ತಿಂಗಳಿಗೆ 1.5 ಕೋಟಿ ಡೋಸ್ ಲಸಿಕೆ ಒದಗಿಸುವಂತೆ ಮುಖ್ಯಮಂತ್ರಿಗಳು ಪ್ರಧಾನಿ ಅವರಲ್ಲಿ ಮನವಿ ಮಾಡಿದರು.

ಮುಂದಿನ ದಿನಗಳಲ್ಲಿ ಮೂರನೇ ಅಲೆಯನ್ನು ಎದುರಿಸಲು ಕೇಂದ್ರ ಸರ್ಕಾರದಿಂದ ಲಸಿಕೆ ಹಂಚಿಕೆ ಹೆಚ್ಚಳ, 800 ನಿಯೊ-ನೇಟಲ್ ಮತ್ತು ಪಿಡಿಯಾಟ್ರಿಕ್ ವೆಂಟಿಲೇಟರುಗಳನ್ನು ಪಿಎಂ-ಕೇರ್ಸ್ ಅಡಿ ಒದಗಿಸುವಂತೆ ಮನವಿ ಮಾಡಲಾಯಿತು.

Advertisement. Scroll to continue reading.

ಕೇಂದ್ರ ಗೃಹ ಸಚಿವ ಅಮಿತ್ ಷಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಆರೋಗ್ಯ ಸಚಿವ ಮನ್ ಸುಖ್ ಮಾಂಡವಿಯ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳಾದ ಡಾ.ಸಿ.ಎನ್. ಅಶ್ವತ್ಥನಾರಾಯಣ, ಗೋವಿಂದ ಎಂ. ಕಾರಜೋಳ, ಕಂದಾಯ ಸಚಿವ ಆರ್. ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!