Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಕೇಂದ್ರದಲ್ಲಿ ಬಾಕಿ ಇರುವ ಜಿಲ್ಲೆಯ ಯೋಜನೆಗಳು ಶೀಘ್ರ ಪೂರ್ಣ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

0


ಉಡುಪಿ : ಕೇಂದ್ರ ಸರ್ಕಾರದ ಮಟ್ಟದಲ್ಲಿ ಮಂಜೂರಾತಿಗೆ ಬಾಕಿ ಇರುವ ಜಿಲ್ಲೆಯ ವಿವಿಧ ಯೋಜನೆ ಮತ್ತು ಕಾಮಗಾರಿಗಳ ಪಟ್ಟಿಯನ್ನು ಕೂಡಲೇ ಸಲ್ಲಿಸಿ. ಈ ಬಗ್ಗೆ ಕೇಂದ್ರದ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸಿ, ಈ ಬಗ್ಗೆ ಶೀಘ್ರದಲ್ಲಿ ಮಂಜೂರುಗೊಳಿಸಲು ಪ್ರಯತ್ನಿಸಲಾಗುವುದು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಅವರು ಇಂದು ವೀಡಿಯೋ ಸಭೆಯ ಮೂಲಕ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಮಾನ್ಸೂನ್ ಹಾನಿಯ ಕುರಿತು ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.
ಜಿಲ್ಲೆಯಲ್ಲಿ ಸಾಗರಮಾಲಾ ಯೋಜನೆಯಡಿ ಬಾಕಿ ಇರುವ ಕಾಮಗಾರಿಗಳ ಬಗ್ಗೆ ವಿವರವಾದ ಮಾಹಿತಿ ನೀಡಿ. ಉಪ್ಪುಂದದಲ್ಲಿ 130 ಕೋಟಿ ರೂ. ವೆಚ್ಚದಲ್ಲಿ ಬಂದರು ನಿರ್ಮಾಣ ಕುರಿತಂತೆ ಕೇಂದ್ರ ಸಚಿವರೊಂದಿಗೆ ಚರ್ಚಿಸಲಾಗಿದೆ. ಕೇಂದ್ರದಲ್ಲಿ ಹೊಸ ಮೀನುಗಾರಿಕಾ ಮಸೂದೆ ಸಿದ್ಧವಾಗುತ್ತಿದ್ದು, ಈ ಬಗ್ಗೆ ಸಲಹೆ ಮತ್ತು ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಸಲ್ಲಿಸಿ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಜಿಲ್ಲೆಯಲ್ಲಿ ಕೋವಿಡ್ 3 ನೆ ಅಲೆ ಎದುರಿಸುವ ನಿಟ್ಟಿನಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಪಾಲನೆ ಕುರಿತು ಪರಿಶೀಲಿಸಿ. ಕಾರ್ಮಿಕರು ಕೆಲಸ ನಿರ್ವಹಿಸುತ್ತಿರುವ ಸ್ಥಳಗಳಲ್ಲಿ ಸಾಮಾಜಿಕ ಅಂತರ ಪಾಲನೆ ಕುರಿತು, ಕಾರ್ಖಾನೆಗಳಿಗೆ ಭೇಟಿ ನೀಡಿ ಅಧಿಕಾರಿಗಳು ಪರಿಶೀಲಿಸಬೇಕು. ಜಿಲ್ಲೆಯಲ್ಲಿ ಈಗಾಗಲೇ ಕಾಮಗಾರಿ ಆರಂಭಿಸಲಾಗಿರುವ ಆಕ್ಸಿಜನ್ ಘಟಕಗಳು ಶೀಘ್ರದಲ್ಲಿ ಕಾರ್ಯನಿರ್ವಹಣೆ ಮಾಡುವಂತೆ ಕ್ರಮ ಕೈಗೊಳ್ಳಿ. ದುರ್ಬಲ ವರ್ಗದವರಿಗೆ ಆದ್ಯತೆಯಲ್ಲಿ ಕೋವಿಡ್ ಲಸಿಕೆ ನೀಡಿ. ಅಪೌಷ್ಠಿಕ ಮಕ್ಕಳನ್ನು ಗುರುತಿಸಿ ಅವರಿಗೆ ಪೌಷ್ಠಿಕ ಆಹಾರ ಸೌಲಭ್ಯ ಒದಗಿಸುವಂತೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡದಂತೆ ಎಚ್ಚರವಹಿಸುವಂತೆ ಸೂಚಿಸಿದರು.
ಮಾನ್ಸೂನ್ ಅವಧಿಯಲ್ಲಿ ನೆರೆ ಹಾನಿಗೊಳಗಾಗುವ ಸಂತ್ರಸ್ಥರಿಗೆ ತಕ್ಷಣದಲ್ಲಿ ಪರಿಹಾರ ವಿತರಿಸುವಂತೆ ತಿಳಿಸಿದ ಸಂಸದರು, ಹಾನಿಗೊಳಗಾಗುವ ತಗ್ಗು ಪ್ರದೇಶಗಳನ್ನು ಗುರುತಿಸಿಕೊಂಡು ಆ ಪ್ರದೇಶದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಯಾವುದೇ ಸಂದರ್ಭದಲ್ಲಿ ನೆರವು ನೀಡಲು ಸಿದ್ಧವಾಗಿರುವಂತೆ ಸೂಚಿಸಿದರು.
ಜಿಲ್ಲಾಧಿಕಾರಿ ಜಿ.ಜಗದೀಶ್ ಮಾತನಾಡಿ, ಜಿಲ್ಲೆಯಲ್ಲಿ ಈ ವರ್ಷ ಪ್ರಾಕೃತಿಕ ವಿಕೋಪದಿಂದ 110 ಕೋಟಿ ರೂ. ಮೂಲಸೌಕರ್ಯಕ್ಕೆ ಹಾನಿಯಾಗಿದ್ದು, ಇದರಲ್ಲಿ ಸಮುದ್ರ ಕೊರೆತದಿಂದ 99 ಕೋಟಿ ರೂ. ಹಾನಿ ಸಂಭವಿಸಿದೆ. ಈ ಬಗ್ಗೆ ಪರಿಹಾರಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೋವಿಡ್ 3 ನೇ ಅಲೆ ತಡೆಯುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಒಟ್ಟು 50 ಮಕ್ಕಳ ಐಸಿಯು ಬೆಡ್‍ಗಳ ವ್ಯವಸ್ಥೆ ಮಾಡಲಾಗುತ್ತಿದೆ. ಜಿಲ್ಲೆಯ 2.40 ಲಕ್ಷ ಮಕ್ಕಳ ಆರೋಗ್ಯ ತಪಾಸಣೆ ಕಾರ್ಯ ನಡೆಯುತ್ತಿದೆ. ಎಂಡೋ ಸಲ್ಫಾನ್ ಪೀಡಿತರಿಗೆ ಹಾಗೂ ಅವರ ಕುಟುಂಬದವರಿಗೆ ಲಸಿಕೆ ನೀಡಲಾಗುತ್ತಿದೆ. ನೆರೆ ಪರಿಹಾರಕ್ಕಾಗಿ 11 ಕೋಟಿ ರೂ. ಹಣ ಇದ್ದು, ಅನುದಾನದ ಕೊರತೆ ಇಲ್ಲ. ವಿಕೋಪ ನಿರ್ವಹಣೆಗೆ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

0 ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರು ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ, ತೀವ್ರ ನಿಗಾ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ. ಎಸ್‌.ಎಂ. ಕೃಷ್ಣ ಅವರನ್ನು ಏಪ್ರಿಲ್ 29 ರಂದು...

ಸಿನಿಮಾ

1 ಸದ್ಯ ಕಿರುತೆರೆಯಲ್ಲಿ ‘ಸೀತಾರಾಮ’ ಜನಪ್ರಿಯ ಧಾರಾವಾಹಿ. ಝೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಈ ಧಾರಾವಾಹಿಗೆ ತನ್ನದೇ ಆದ ಅಭಿಮಾನಿ ಬಳಗವಿದೆ. ಅದರಲ್ಲೂ ಅಗ್ನಿಸಾಕ್ಷಿಯ ಸನ್ನಿಧಿ ಖ್ಯಾತಿಯ ವೈಷ್ಣವಿಗೌಡ ಈ ಧಾರಾವಾಹಿಯಲ್ಲಿ ನಾಯಕಿಯಾಗಿ ನಟಿಸಿದ್ದಾರೆ....

ಜ್ಯೋತಿಷ್ಯ

0 ದಿನಾಂಕ : ೧೨-೦೫-೨೪, ವಾರ : ಭಾನುವಾರ ಹಣದ ಖರ್ಚು ಹೆಚ್ಚಿರಲಿದೆ. ಇದರಿಂದ ನಿಮ್ಮ ಬಜೆಟ್ ಅಸಮತೋಲನವಾಗಬಹುದು. ಹಣದ ವಿಚಾರಕ್ಕೆ ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ....

ಸಿನಿಮಾ

0 ಬೆಂಗಳೂರು: ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ ಚೇತನ್ ಚಂದ್ರ ಮೇಲೆ ಅಟ್ಯಾಕ್ ಮಾಡಲಾಗಿದೆ. ಸುಮಾರು 20 ಮಂದಿ ಅಟ್ಯಾಕ್ ಮಾಡಿದ್ದಾರೆ ಎಂದು...

ಜ್ಯೋತಿಷ್ಯ

0 ದಿನಾಂಕ: ೧೩-೦೫-೨೪, ವಾರ : ಸೋಮವಾರ, ನಕ್ಷತ್ರ : ಪುನರ್ವಸು, ತಿಥಿ: ಷಷ್ಠಿ ನೀವು ಪ್ರಮುಖ ಸಭೆಗೆ ಹಾಜರಾಗಬಹುದು. ಪ್ರೇಮ ಸಂಬಂಧಗಳಲ್ಲಿ ತೀವ್ರತೆ ಹೆಚ್ಚಾಗುವ ಸಾಧ್ಯತೆಗಳಿವೆ. ಕೆಲಸದ ಸ್ಥಳದಲ್ಲಿ ನೀವು ಸ್ನೇಹಿತರಿಂದ...

error: Content is protected !!