ಉಡುಪಿ : ಕರ್ನಾಟಕ ಫ್ರೌಢ ಶಿಕ್ಷಣ ಮಂಡಳಿಯ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಜುಲೈ 19 ಮತ್ತು 22 ರಂದು ಜಿಲ್ಲೆಯ ಒಟ್ಟು 77 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು, ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ಮತ್ತು ಕಿಡಿಗೇಡಿಗಳು ಪರೀಕ್ಷಾ ಕೇಂದ್ರದ ಪರಿಸರವನ್ನು ಕಲುಷಿತಗೊಳಿಸದಂತೆ, ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಪರೀಕ್ಷೆಗಳು ನಡೆಯುವ ದಿನದಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಹಾಗೂ 200 ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.