ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ನಟಿ ಅಭಿನಯ ಶಾರದೆ ಜಯಂತಿ (76) ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.
ಅಭಿಯನ ಶಾರದೆ ಎಂದೇ ಖ್ಯಾತರಾಗಿದ್ದ ಅವರು ಒಟ್ಟು ಆರು ಭಾಷೆಗಳಲ್ಲಿ 190 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ವರನಟ ಡಾ. ರಾಜ್ ಕುಮಾರ್ ಜೊತೆಗೆ ಸುಮಾರು 45 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಜನಪ್ರಿಯರಾಗಿದ್ದಾರೆ.
ರಾಷ್ಟ್ರ ಪ್ರಶಸ್ತಿ ಪಡೆದ ನಾಯಕಿ :
1968 ರಲ್ಲಿ ತೆರೆ ಕಂಡ ವೈ. ಅರ್ .ಸ್ವಾಮಿ ನಿರ್ದೇಶನದ ‘ಜೇನು ಗೂಡು ‘ ಚಿತ್ರದ ಮೂಲಕ ಚಿತ್ರ ರಂಗ ಪ್ರವೇಶಿಸಿದರು. ಜಯಂತಿಯವರ ಮೂಲ ಹೆಸರು’ಕಮಲ ಕುಮಾರಿ. ಜೇನುಗೂಡು ಚಿತ್ರಕ್ಕೂ ಮೊದಲು ‘ಜಗದೇಕ ವೀರನ ಕಥೆ ‘ಚಿತ್ರದಲ್ಲಿ ಸಣ್ಣ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದರು. ನಿರ್ಮಾಪಕಿಯೂ ನಿರ್ದೇಶಕಿಯೂ ತೊಡಗಿಕೊಂದ್ದ ಅವರಿಗೆ 1965 ‘ಮಿಸ್ ಲೀಲಾವತಿ’ ಚಿತ್ರದ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿ ಬಂದಿದೆ.’ ಎರಡು ಮುಖ'(1969),ಮನಸ್ಸಿನಂತೆ ಮಾಂಗಲ್ಯ'(1976),’ಧರ್ಮ ದಾರಿ ತಪ್ಪಿತು'(1981),ಮಸಣದ ಹೂವು (1985),’ಆನಂದ್ ‘(1989) ಚಿತ್ರಗಳ ಅಭಿನಯಕ್ಕಾಗಿ ಐದು ಬಾರಿ ರಾಜ್ಯ ಪ್ರಶಸ್ತಿ ಗಳಿಸಿದ್ದಾರೆ. ಎಡಕಲ್ಲು ಗುಡ್ಡದ ಮೇಲೆ ಚಿತ್ರದ ಪಾತ್ರ ಅವರ ನಟನಾ ಪ್ರತಿಭೆಯನ್ನು ಮತ್ತಷ್ಟು ಜನಪ್ರಿಯಗೊಳಿಸಿತ್ತು.