ಬೆಂಗಳೂರು : ಕರ್ನಾಟಕದ 30 ನೇ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣ ವಣನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು.
ಕರ್ನಾಟಕದ 11 ನೇ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಎಸ್.ಆರ್.ಬೊಮ್ಮಾಯಿ ಪುತ್ರರಾಗಿರುವ ಬಸವರಾಜ್ ಬೊಮ್ಮಾಯಿ ಇದೀಗ ಮುಖ್ಯಮಂತ್ರಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. 1960, ಜನವರಿ 28 ರಂದು ಜನಿಸಿದ ಅವರು ಇಂಜಿನಿಯರಿಂಗ್ ಪದವೀಧರರು. ಹಾವೇರಿ ಜಿಲ್ಲೆಯ ಶಿಗ್ಗಾಂವ್ ನಿಂದ ಎರಡು ಬಾರಿ ಎಂ ಎಲ್ ಸಿ ಹಾಗೂ ಮೂರು ಬಾರಿ ಶಾಸಕರಾಗಿದ್ದರು. ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಆಪ್ತರು ಆಗಿದ್ದಾರೆ.
Advertisement. Scroll to continue reading.