ವರದಿ : ದಿನೇಶ್ ರಾಯಪ್ಪನ ಮಠ
ಕುಂದಾಪುರ: ಸಚಿವ ಸಂಪುಟದಲ್ಲಿ ಮಂತ್ರಿಯಾದವರು ಹೊಸ ಸಚಿವ ಸಂಪುಟದಲ್ಲಿ ಮಂತ್ರಿಯಾಗಬೇಕೆಂದು ನಿರ್ಧರಿಸಲು ಸಾಧ್ಯವಿಲ್ಲ. ನೂತನ ಮುಖ್ಯಮಂತ್ರಿಗಳು, ಪಕ್ಷದ ವರಿಷ್ಠರಾದ ಯಡಿಯೂರಪ್ಪನವರು, ರಾಜ್ಯಧ್ಯಕ್ಷರು, ಕೇಂದ್ರ ನಾಯಕರು ನಿರ್ಧರಿಸುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು
ಮಾಧ್ಯಮದವರ ಜೊತೆ ಮಾತನಾಡಿದ ಅವರು ಮುಂದಿನ ಒಂದೂವರೆ ವರ್ಷ ಉತ್ತಮ ಆಡಳಿತ ನೀಡಿ ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಅಧಿಕಾರಕ್ಕೆ ಬರಲು ನಾವೆಲ್ಲಾ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದರು.
ಮಂತ್ರಿಯಾಗುವ ನಿರೀಕ್ಷೆ ಇದೆಯಾ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ನಿರೀಕ್ಷೆ ಇಲ್ಲದ ರಾಜಕಾರಣಿ ಕರ್ನಾಟಕದಲ್ಲಿ ಯಾರದರೂ ಇದ್ದಾರೆಯೇ..?
ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಯಡಿಯೂರಪ್ಪನವರು ಸಚಿವ ಸಂಪುಟದಲ್ಲಿ ಸ್ಥಾನ ನೀಡಿದ್ದರು. ನನಗೆ ಕೊಟ್ಟ ಎರಡು ಖಾತೆಯಲ್ಲಿ ಭ್ರಷ್ಟಾಚಾರ ಇಲ್ಲದೇ ಆಡಳಿತ ನೀಡಿದ್ದೇನೆ. ಇದನ್ನೆಲ್ಲಾ ಗಮನಿಸಿ ರಾಷ್ನೂತನ ಸಂಪುಟದಲ್ಲಿ ಸ್ಥಾನ ನೀಡುತ್ತಾರೆ ಎಂಬ ವಿಶ್ವಾಸ ಇದೆ ಎಂದು ನುಡಿದರು